ಕೋಲಾರ: ನಾಲ್ಕು ತಿಂಗಳಿಂದ ಸಂಬಳ ಬಾಕಿ ಉಳಿಸಿಕೊಂಡ ಕಂಪನಿ ವಿರುದ್ಧ ಸಿಡಿದೆದ್ದ ಕಾರ್ಮಿಕರು ಕಂಪನಿಯ ಕಟ್ಟಡದ ಮೇಲೆ ಕಲ್ಲು ತೂರಾಟ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋಲಾರ ಬಳಿಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಆರಂಭವಾಗಿದ್ದ ದೇಶದ ಏಕೈಕ ಐಫೋನ್ ತಯಾರಿಕ ಕಂಪನಿ ವಿಸ್ಟ್ರಾನ್‌ನಲ್ಲಿ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ನಡುವಿನ ಜಗಳ ಬೀದಿಗೆ ಬಂದಿದ್ದು, ನಾಲ್ಕು ತಿಂಗಳ ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ಇಂದು ತಾಳ್ಮೆ ಕಳೆದುಕೊಂಡಿದ್ದಾರೆ. ಪರಿಣಾಮ ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
PublicNext
12/12/2020 02:19 pm