ಮಂಡ್ಯ: ಕಾಣೆಯಾಗಿದ್ದ ಮಂಡ್ಯ ಜಿಲ್ಲೆ ಪಾಂಡವಪುರದ ತಾಯಿ ಹಾಗೂ ಮಗಳು ಶವವಾಗಿ ನಾಲೆಯಲ್ಲಿ ಪತ್ತೆಯಾಗಿದ್ದಾರೆ.
ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಸಲೀಮಾ (36) ಮತ್ತು ಅವರ ಪುತ್ರಿ ಸಬಾನಾ (17) ಮೃತರು. ನನ್ನ ಪತ್ನಿ ಹಾಗೂ ಮಗಳು ನಾಪತ್ತೆಯಾಗಿದ್ದಾರೆ ಎಂದು ಸಲೀಮಾ ಪತಿ ಮೇಲುಕೋಟೆ ಠಾಣೆಯಲ್ಲಿ ಡಿಸೆಂಬರ್ 14ರಂದು ಪ್ರಕರಣ ದಾಖಲಿಸಿದ್ದರು. ಆದರೆ ಎರಡು ದಿನದ ಬಳಿಕ ಅಂದ್ರೆ ಬುಧವಾರ ಅವರಿಬ್ಬರ ಶವ ನಾಗಮಂಗಲ ತಾಲೂಕಿನ ಗಂಗವಾಡಿ ಸಮೀಪದ ನಾಲೆಯಲ್ಲಿ ಪತ್ತೆಯಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ ಹಾಗೂ ಮಗಳು ಅವರಿಬ್ಬರೂ ಚಾಮರಾಜನಗರ-ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ನ್ಯಾಮನಹಳ್ಳಿ ಸಮೀಪದ ನಾಲೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ನಾಗಮಂಗಲ ಪಟ್ಟಣದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
16/12/2020 06:15 pm