ಜೈಪುರ್: ಮೂರನೇ ಮಹಡಿಯಿಂದ ಕಂಬವೊಂದು ಜಾರಿಬಿದ್ದು ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ರಾಜಸ್ಥಾನದ ಭಾರತ್ಪುರದ ಮಾರುಕಟ್ಟೆಯಲ್ಲಿ ನಡೆದಿದೆ.
ಈ ದುರ್ಘಟನೆಯ ದೃಶ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಮುಂದೆ ಇಬ್ಬರು ಯುವಕರು ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮೂರನೇ ಮಹಡಿಯಿಂದ ಜಾರಿ ಬಿದ್ದ ಕಂಬವು ಒಬ್ಬನ ತಲೆಯ ಮೇಲೆ ಬಿದ್ದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಯುವಕ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾನೆ.
ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾತ್ ಮತ್ತೋರ್ವ ಯುವಕ ಅಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
PublicNext
17/12/2020 01:42 pm