ನವದೆಹಲಿ: ಕೋಲಾರದ ನರಸಾಪುರದ iPhone ಉತ್ಪದನಾ ಘಟಕ ಕಚೇರಿ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ವಿಸ್ಟ್ರಾನ್ ಕಂಪನಿಯ ಉಪಾಧ್ಯಕ್ಷ ಲೀ ವಿನ್ಸೆಂಟ್ ತಲೆದಂಡವಾಗಿದೆ.
ಉದ್ಯೋಗಿಗಳಿಗೆ ಸಂಬಳ ನೀಡುವುದರಲ್ಲಿ ವ್ಯತ್ಯಯ ಉಂಟಾಗಿರುವುದಿಂದ ಗಲಾಟೆ ನಡೆದಿದೆ ಸ್ವತಃ ಭಾರತದ ವಿಸ್ಟ್ರಾನ್ ಕಂಪನಿ ಒಪ್ಪಿಕೊಂಡಿದೆ.
ವೇತನ ನೀಡದೆ ಸತಾಯಿಸಿದ, ವೇತನದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಉದ್ಯೋಗಿಗಳು ಡಿ.12ರಂದು ಬೆಳಗ್ಗೆ ಕಚೇರಿಗೆ ನುಗ್ಗಿ ಪೀಠೋಪಕರಣ, ಲೈಟ್, ಕಂಪ್ಯೂಟರ್ ಸೇರಿದಂತೆ ವಸ್ತುಗಳನ್ನು ಕೊಠಡಿಗಳನ್ನು ಪುಡಿ ಮಾಡಿದ್ದರು. ಪರಿಣಾಮ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿತ್ತು.
ಈ ಬಗ್ಗೆ ಸ್ಪಷ್ಟನೆ ನೀಡಿರುವೆ ವಿಸ್ಟ್ರಾನ್, "ನಮ್ಮಿಂದ ತಪ್ಪಾಗಿರುವುದನ್ನು ಅರಿತಿದ್ದೇವೆ. ಕಾರ್ಮಿಕ ಏಜೆನ್ಸಿಗಳು ಹಾಗೂ ಪಾವತಿಗಳನ್ನು ನಿರ್ವಹಿಸಲು ಕೆಲ ಪ್ರಕ್ರಿಯೆಗಳನ್ನು ಬಲಪಡಿಸಬೇಕಿದೆ ಹಾಗೂ ನವೀಕರಿಸಬೇಕಿದೆ. ಶಿಸ್ತು ಕ್ರಮ ಸೇರಿದಂತೆ ತಕ್ಷಣವೇ ಈ ಕುರಿತು ಕ್ರಮ ಕೈಗೊಳ್ಳುತ್ತೇವೆ. ಇದರ ಭಾಗವಾಗಿ ಕಂಪನಿಯ ಭಾರತದ ಉಪಾಧ್ಯಕ್ಷರನ್ನು ಹುದ್ದೆಯಿಂದ ತೆಗೆಯಲಾಗಿದೆ'' ಎಂದು ತಿಳಿಸಿದೆ.
ಉಪಾಧ್ಯಕ್ಷ ಹುದ್ದೆಯಲ್ಲಿದ್ದ ವಿನ್ಸೆಂಟ್ ಲೀಯವರನ್ನು ತೆಗೆದು ಹಾಕಲಾಗಿದ್ದು, ವಿಸ್ಟ್ರಾನ್ ಸ್ಮಾರ್ಟ್ ಡಿವೈಸಸ್‍ನ ಭಾರತದ ಎಂಡಿಯಾಗಿ ಸುಧಿತೋ ಗುಪ್ತಾ ಸದ್ಯಕ್ಕೆ ಮುಂದುವರಿಯಲಿದ್ದಾರೆ. ಎಲ್ಲ ಕಾರ್ಮಿಕರಿಗೆ ತಕ್ಷಣವೇ ಪರಿಹಾರ ನೀಡಿ, ಈ ಕುರಿತು ಖಚಿತಪಡಿಸುವುದು ಮೊದಲ ಆದ್ಯತೆಯಾಗಿದೆ. ಕಾರ್ಮಿಕರಿಗಾಗಿ ನೌಕರರ ನೆರವು ಕಾರ್ಯಕ್ರಮವನ್ನು ಸ್ಥಾಪಿಸಲಾಗುವುದು ಎಂದು ಸಂಸ್ಥೆ ಹೇಳಿದೆ.
PublicNext
19/12/2020 07:54 pm