ಜೈಪುರ: ಐವರು ಕಾಮುಕರು ತ್ರಿ ಸ್ಟಾರ್ ಹೋಟೆಲ್‌ನಲ್ಲಿ ಸೆಕ್ಸ್ ವರ್ಕರ್ ಇಲ್ಲದ್ದಕ್ಕೆ ಸಿಬ್ಬಂದಿ ಮೇಲೆಯೇ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ರಾಜಸ್ಥಾನದ ನೀಮ್ರಾನಾದಲ್ಲಿ ನಡೆದಿದೆ.
ಆರೋಪಿಗಳನ್ನು ನರೇಶ್ ಗುಜ್ಜರ್, ಲೋಕೇಶ್, ರಾಹುಲ್, ದನ್ವೀರ್ ಮತ್ತು ಪ್ರಿನ್ಸ್ ತಿವಾರಿ ಎಂದು ಗುರುತಿಸಲಾಗಿದೆ. ಎಲ್ಲ ಐವರನ್ನೂ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಈ ಭಯಾನಕ ಸತ್ಯ ಬೆಳಕಿಗೆ ಬಂದಿದೆ.
ಆರೋಪಿಗಳು ಕಾಮುಕರು ಶುಕ್ರವಾರದಂದು ತ್ರಿ ಸ್ಟಾರ್ ಹೋಟೆಲ್‌ನಲ್ಲಿ ತಂಗಿದ್ದರು. ರೂಮಿಗೆ ತೆರಳಿದ ಕೆಲವೇ ಕ್ಷಣದಲ್ಲಿ ಮತ್ತೆ ಬಂದ ಅವರು, ಸೆಕ್ಸ್ ವರ್ಕರ್ಗಳನ್ನು ನಮ್ಮ ರೂಮಿಗೆ ಕಳುಹಿಸುವಂತೆ ಕೇಳಿದ್ದಾರೆ. ಆದರೆ ಅದಕ್ಕೆ ಹೋಟೆಲ್ನ ಸಿಬ್ಬಂದಿ ನಿರಾಕರಿಸಿದ್ದಾರೆ. ಸಿಟ್ಟಿಗೆದ್ದ ಆರೋಪಿಗಳು, ಮಹಿಳಾ ಸಿಬ್ಬಂದಿ ಮಲಗಿದ್ದ ಕೋಣೆಗೆ ತೆರಳಿದ್ದರು. ಇಬ್ಬರು ಆರೋಪಿಗಳು ರೂಮಿನ ಒಳಗೆ ಹೋದರೆ, ಮೂವರು ಹೊರಗಡೆ ಕಾವಲು ಕಾದಿದ್ದಾರೆ. ಒಳಗಿದ್ದ ಸಿಬ್ಬಂದಿಗೆ ಪಿಸ್ತೂಲು ತೋರಿಸಿ, ಇಬ್ಬರ ಮೇಲೆ ಅತ್ಯಾಚಾರವೆಸಗಿದ್ದಾರೆ.
ಆರೋಪಿಗಳ ನಡೆಯಿಂದ ಬೇಸತ್ತ ಹೋಟೆಲ್ ಮ್ಯಾನೇಜರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ದಾವಿಸಿದ ಪೊಲೀಸರು ಮಹಿಳಾ ಸಿಬ್ಬಂದಿಯನ್ನು ರಕ್ಷಿಸಿ, ಕಾಮುಕರನ್ನು ಬಂಧಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದಾಗ ಆಘಾತಕಾರಿ ವಿಚಾರ ಹೊರಬಿದ್ದಿದೆ. ಈ ಐವರು ಆರೋಪಿಗಳು ಓರ್ವ ಉದ್ಯಮಿಯನ್ನು ಕೊಲೆ ಮಾಡುವ ಉದ್ದೇಶದಿಂದ ನಗರಕ್ಕೆ ಬಂದಿದ್ದು, ಅಲ್ಲಿ ಹೋಟೆಲ್ ಬುಕ್ ಮಾಡಿದ್ದರು ಎನ್ನುವುದು ತಿಳಿದುಬಂದಿದೆ.
PublicNext
20/12/2020 05:55 pm