ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಮಕ್ಕಳ ಫೋನ್ ಬಳಕೆ ಹೆಚ್ಚಾಗುತ್ತಿದೆ.
ಆನ್ ಲೈನ್ ಕ್ಲಾಸ್ ಸೇರಿದಂತೆ ಹಲವು ಕಾರಣಗಳಿಂದಾಗಿ ಮಕ್ಕಳು ಅವಶ್ಯಕ ಮತ್ತು ಅನಾವಶ್ಯಕವಾಗಿ ಮೊಬೈಲ್ ಗಳನ್ನಾ ತುಸು ಹೆಚ್ಚಾಗಿಯೇ ಬಳಸುತ್ತಿದ್ದಾರೆ.
ಹೀಗೆ 13 ವರ್ಷದ ಬಾಲೆಯೋರ್ವಳು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಬಳಸುತ್ತಾ ಅಪರಿಚಿತ ವ್ಯಕ್ತಿಯ ಪರಿಚಯವಾಗಿದೆ.
ಈ ಕಿರಾತಕ ಬಾಲಕಿಗೆ ತನ್ನ ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಪ್ರತಿದಿನ ಚಾಟಿಂಗ್ ಮಾಡಿ ಸಂಪರ್ಕಿಸಿದ್ದ. ತನ್ನ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಬಾಲಕಿಗೆ ಕಳುಹಿಸಿ ಆಕೆಗೂ ನಗ್ನ ಫೋಟೋ ಮತ್ತು ವಿಡಿಯೋಗಳನ್ನು ತನಗೆ ಕಳುಹಿಸುವಂತೆ ಸೇರಿದಂತೆ ಲೈಂಗಿಕವಾಗಿ ಸಹಕರಿಸುವಂತೆ ಬಾಲಕಿಗೆ ಆಡಿಯೋ ಸಂದೇಶಗಳನ್ನು ಕಳುಹಿಸಿ ಪೀಡಿಸಿದ್ದಾನೆ.
ಸದ್ಯ ಸಂತ್ರಸ್ತ ಬಾಲಕಿಯ ಪೋಷಕರು ಇ-ಮೇಲ್ ಮೂಲಕ ದೂರು ನೀಡಿದ್ದಾರೆ.
ಈ ದೂರು ಆಧರಿಸಿ ದಕ್ಷಿಣ ವಿಭಾಗದ ಸಿಇಎನ್ ಠಾಣೆ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
PublicNext
21/12/2020 08:14 am