ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇರಳದ ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ: 60 ಮಂದಿ ಅರೆಸ್ಟ್

ಇಡುಕ್ಕಿ: ಕೇರಳದ ಇಡುಕ್ಕಿ ಜಿಲ್ಲೆಯ ವಾಗಮೊನ್‌ನಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ರೇವ್​ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹೆರಾಯಿನ್, ಗಾಂಜಾ ಸೇರಿದಂತೆ ಇನ್ನಿತರ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಪೊಲೀಸರು, 60 ಜನರನ್ನು ಬಂಧಿಸಿದ್ದಾರೆ.

ಕೋವಿಡ್​ ನಡುವೆ ಅನುಮತಿಯಿಲ್ಲದೆ ವಾಗಮೊನ್‌ನ ಕ್ಲಿಫ್ ಇನ್ ರೆಸಾರ್ಟ್‌ನಲ್ಲಿ ಭಾನುವಾರ ಸಂಜೆ ರೇವ್​ ಪಾರ್ಟಿ ಆಯೋಜಿಸಲಾಗಿತ್ತು. ನಿಖರ ಮಾಹಿತಿ ಮೇರೆಗೆ ಮಹಿಳಾ ಕಾನ್​ಸ್ಟೇಬಲ್‌ಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಬಂಧಿತರನ್ನು ವಿಚಾರಣೆಗೊಳಪಡಿಸಿರುವುದಾಗಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬಂಧಿತರಲ್ಲಿ ಧಾರಾವಾಹಿ ಹಾಗೂ ಸಿನಿಮಾ ಕಲಾವಿದರೂ ಇದ್ದಾರೆ ಎಂಬ ಮಾಹಿತಿ ಇದೆ.

Edited By : Nagaraj Tulugeri
PublicNext

PublicNext

21/12/2020 06:31 pm

Cinque Terre

59 K

Cinque Terre

0