ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಮನೆಯಲ್ಲಿ ಅಕ್ರಮ ಮದ್ಯ ದಾಸ್ತಾನು; ಆರೋಪಿ ನಾಪತ್ತೆ

ಶಿವಮೊಗ್ಗ: ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.

ಕಪಾಟಿನ ಕೆಳಗೆ ಮದ್ಯದ ಬಾಟಲಿಗಳನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿತ್ತು.

ಹೊಸನಗರ ತಾಲೂಕು ಮತ್ತಿಮನೆ ಗ್ರಾಮದ ಗಣೇಶ್ ಎಂಬವರ ಮನೆಯಲ್ಲಿ ದಾಳಿ ನಡೆಸಿ, ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. 24 ಸಾವಿರ ಮೌಲ್ಯದ 52 ಲೀಟರ್ ಮದ್ಯ ವಶಪಡಿಸಲಾಗಿದೆ.

ಆರೋಪಿ ನಾಪತ್ತೆಯಾಗಿದ್ದು, ಪತ್ತೆ ಕಾರ್ಯ ನಡೆಯುತ್ತಿದೆ. ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾ.ಅಜಿತ್ ಕುಮಾರ್ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಉಪ ವಿಭಾಗದ ಇನ್ ಸ್ಪೆಕ್ಟರ್ ಹನುಮಂತಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Edited By : Nagaraj Tulugeri
PublicNext

PublicNext

21/12/2020 10:30 pm

Cinque Terre

108.04 K

Cinque Terre

3