ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಸ್ಟರ್ ಅಭಯಾ ಸಾವು ಕೇಸ್: ಫಾದರ್ ಥಾಮಸ್, ಸೆಫಿ ದೋಷಿಗಳು- ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು

ತಿರುವನಂತಪುರ: ಸಿಸ್ಟರ್ ಅಭಯಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂನ ಸಿಬಿಐ ವಿಶೇಷ ನ್ಯಾಯಾಲಯವು ಇಂದು ತೀರ್ಪು ಪ್ರಕಟಿಸಿದೆ.

ಪ್ರಮುಖ ಆರೋಪಿಗಳಾದ ಫಾದರ್ ಥಾಮಸ್, ಸಿಸ್ಟರ್ ಸೆಫಿ ಇಬ್ಬರೂ ತಪ್ಪಿತಸ್ಥರು ಎಂದು ಕೋರ್ಟ್‌ ಹೇಳಿದ್ದು, ಆರೋಪಿಗಳಿಗೆ ಡಿಸೆಂಬರ್ 23ರಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿದೆ.

ಏನಿದು ಪ್ರಕರಣ?:

1992ರ ಮಾರ್ಚ್ 27ರಂದು ಕೊಟ್ಟಾಯಂ ಪಯಸ್ ಟೆನ್ತ್ ಕಾನ್ವೆಂಟ್‌ನ ಬಾವಿಯಲ್ಲಿ 19 ವರ್ಷ ವಯಸ್ಸಿನ ಸಿಸ್ಟರ್ ಅಭಯಾ ಶವ ಪತ್ತೆಯಾಗಿತ್ತು. ಇದು ಆತ್ಮಹತ್ಯೆ ಪ್ರಕರಣ ಎಂದು ಸ್ಥಳೀಯ ಪೊಲೀಸರು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರು. ಆದರೆ ಅಂದಿನ ಕೊಟ್ಟಾಯಂ ನಗರಸಭೆ ಚೇರ್ಮನ್ ಪಿಸಿ ಚೆರಿಯನ್ ಮಡುಕ್ಕನಿ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಜೋಮೋನ್ ಪುತ್ತನ್ ಪುರಕಲ್ ಅವರು ಈ ಪ್ರಕರಣವನ್ನು ಕೋರ್ಟಿಗೆ ಮನವಿ ಮಾಡಿದ್ದರು.

ಪ್ರಕರಣದ ತನಿಖೆಯನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿತ್ತು. ಆದರೆ ಕ್ರೈಂ ಬ್ರಾಂಚ್‌ ಪೊಲೀಸರು ಕೂಡ ಅಭಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಷರಾ ಹಾಕಿದರು. 1993 ಮಾರ್ಚ್ 29ಕ್ಕೆ ತನಿಖೆಯನ್ನು ಸಿಬಿಐ ವಹಿಸಿಕೊಂಡಿತ್ತು. ಪ್ರಕರಣ ಪ್ರಮುಖ ಆರೋಪಿ ಫಾದರ್ ಥಾಮಸ್ ಎಂ.ಕೊಟ್ಟೂರ್, ಫಾದರ್ ಜೋಸ್ ಪೂತೃಕ್ಕಯಿಲ್, ಸಿಸ್ಟರ್ ಸೆಫಿ ಬಂಧಿಸಲಾಗಿತ್ತು. ಆದರೆ ಎಲ್ಲರಿಗೂ ಜಾಮೀನು ಸಿಕ್ಕಿತ್ತು, 2018ರಲ್ಲಿ ಫಾದರ್ ಜೋಸ್ ಪೂತೃಕ್ಕಯಿಲ್ ಪ್ರಕರಣದಿಂದ ಖುಲಾಸೆಗೊಂಡಿದ್ದರು.

1992ರ ಮಾರ್ಚ್ 27ರಂದು ಕಾನ್ವೆಂಟ್ ರೂಮೊಂದರಲ್ಲಿ ಸಿಸ್ಟರ್ ಸೆಫಿ ಹಾಗೂ ಥಾಮಸ್ ಎಂ.ಕೊಟ್ಟೂರ್ ಇಬ್ಬರ ನಡುವೆ ನಿಕಟ ಸಂಪರ್ಕವಿದ್ದುದ್ದನ್ನು ಅಕಸ್ಮಿಕವಾಗಿ ಅಭಯಾ ನೋಡಿದ್ದಾರೆ. ನಂತರ ಕೊಟ್ಟೂರ್, ಜೋಸ್ ಹಾಗೂ ಸೆಫಿ ಸೇರಿಕೊಂಡು ಅಭಯಾರನ್ನು ಕೊಚ್ಚಿ ಕೊಂದು, ಬಾವಿಗೆ ಎಸೆದಿದ್ದರು ಎಂದು ಸಿಬಿಐ ತನ್ನ ದೋಷಾರೋಪಣ ಪಟ್ಟಿಯಲ್ಲಿ ಹೇಳಿತ್ತು. ಈ ಪ್ರಕರಣ ಕೇರಳ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿತ್ತು.

Edited By : Vijay Kumar
PublicNext

PublicNext

22/12/2020 01:57 pm

Cinque Terre

59.99 K

Cinque Terre

2

ಸಂಬಂಧಿತ ಸುದ್ದಿ