ಹೈದರಾಬಾದ್: ಕುರಿ ಸಾಗಿಸುವಂತೆ ಒಂದರ ಮೇಲೊಂದು ಹಸುಗಳನ್ನು ಟ್ರಕ್‌ನಲ್ಲಿ ಹಾಕಿ ಸಾಗಿಸುತ್ತಿದ್ದ ಅಮಾನವೀಯ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
ತೆಲಂಗಾಣದ ಗೋಷಮಹಲ್‌ನ ಬಿಜೆಪಿ ಶಾಸಕ ರಾಜಾ ಸಿಂಗ್ ಅವರು ತಮ್ಮ ಬೆಂಬಲಿಗರ ಜೊತೆ ಸೇರಿ ಗೋವುಗಳನ್ನು ರಕ್ಷಣೆ ಮಾಡಿದ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಜೊತೆಗೆ ''ಹೈದರಾಬಾದ್‌ನ ಹೊರವಲಯದಲ್ಲಿರುವ ಶಂಶಾಬಾದ್‌ನಲ್ಲಿ ಇಂದು ಬೆಳಿಗ್ಗೆ ಟ್ರಕ್‌ನಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದು ಗೋವುಗಳನ್ನು ರಕ್ಷಣೆ ಮಾಡಿ, ಗೋಶಾಲೆಗೆ ಸ್ಥಳಾಂತರಿಸಲಾಗಿದೆ ಹಾಗೂ ಟ್ರಕ್ ಅನ್ನು ಪೊಲೀಸರಿಗೆ ಒಪ್ಪಿಸಲಾಗಿದೆ'' ಎಂದು ತಿಳಿಸಿದ್ದಾರೆ.
ಶಾಸಕ ರಾಜಾ ಸಿಂಗ್ ಅವರ ಕೆಲಸಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
PublicNext
22/12/2020 06:26 pm