ಬೆಂಗಳೂರು: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಕಾಡುಗೋಡಿಯ ಕಾಶಿ ವಿಶ್ವನಾಥ ದೇವಾಲಯದ ಅರ್ಚಕ ನೀಲಕಂಠ ದೀಕ್ಷಿತ್ ಅವರು ಶವ ಪತ್ತೆಯಾಗಿದೆ. ಶವದ ಸ್ಥಿತಿ ನೋಡಿದರೆ ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಮೂರು ತಿಂಗಳ ಹಿಂದೆ ನೀಲಕಂಠ ದೀಕ್ಷಿತ್ (57) ಕಾಣೆಯಾಗಿದ್ದರು. ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾಶಿ ವಿಶ್ವನಾಥ ದೇವಾಲಯದ ಅರ್ಚಕ ನೀಲಕಂಠ ದೀಕ್ಷಿತ್ ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದು ಪೊಲೀಸರು ತನಿಖೆ ಕೈಗೊಂಡು ಪತ್ತೆ ಕಾರ್ಯ ನಡೆಸುತ್ತಿದ್ದಾಗ ನೀಲಕಂಠ ದೀಕ್ಷಿತ್ ಅವರ ಅವರ ಮೃತದೇಹವು ಪತ್ತೆಯಾಗಿದ್ದು ಕೊಲೆಯಾಗಿರುವುದು ಕಂಡುಬಂದಿದೆ. ಕಾಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
PublicNext
22/12/2020 08:11 pm