ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ವೈದ್ಯಕೀಯ ವಿದ್ಯಾರ್ಥಿನಿ ನೇಣಿಗೆ ಶರಣು

ಶಿವಮೊಗ್ಗ: ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ರಾಯಚೂರು ಮೂಲದ ಲಲಿತಾ (23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಲಲಿತಾ ಶಿವಮೊಗ್ಗ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದರು. ವಿದ್ಯಾರ್ಥಿನಿಯ ತಂದೆ ಶಿಕ್ಷಕರಾಗಿದ್ದು ಭದ್ರಾವತಿಯಲ್ಲಿ ವಾಸವಾಗಿದ್ದಾರೆ.

ಲಲಿತಾ ಹಾಸ್ಟೆಲ್‌ನಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದಳು. ಮಂಗಳವಾರ ರಾತ್ರಿ 2 ಗಂಟೆಯವರೆಗೂ ಓದುತ್ತಾ ಕುಳಿತಿದ್ದಳು. ಆದರೆ ರಾತ್ರಿ ಮುಂಜಾನೆ ರೂಮ್‌ನಿಂದ ಹೊರ ಬರದೆ ಇರುವುದನ್ನು ಗಮನಿಸಿ ಬಾಗಿಲು ಬಡೆದಿದ್ದಾರೆ. ಆಗಲೂ ಹೊರಗೆ ಬರದೆ ಇದ್ದಾಗ ಬಾಗಿಲು ಮುರಿದು ಒಳಗೆ ನೋಡಿದಾಗ ಲಲಿತಾ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.

ತಕ್ಷಣವೇ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳು ಲಲಿತಾ ಪೋಷಕರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಬಂದ ಮೇಲೆ ಲಲಿತಾ ಮೃತದೇಹವನ್ನು ಇಳಿಸಿ ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ. ಲಲಿತಾ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ.

ಈ ಸಂಬಂದ ದೊಟ್ಟಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Edited By : Vijay Kumar
PublicNext

PublicNext

23/12/2020 05:28 pm

Cinque Terre

106.56 K

Cinque Terre

3

ಸಂಬಂಧಿತ ಸುದ್ದಿ