ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಸ್ಸೆಸ್ಸೆಲ್ಸಿ ಹುಡುಗನಿಗೆ ಡಿಗ್ರಿ ಹುಡುಗಿ ಮೇಲೆ ಲವ್: ಪೋಷಕರಿಗೆ ಗೊತ್ತಾದ ಮೇಲೆ ಸುಸೈಡ್

ತೆಲಂಗಾಣ: ಪರಸ್ಪರ ಲವ್ ಮಾಡುತ್ತಿರುವ ವಿಷಯ ಪೋಷಕರಿಗೆ ಗೊತ್ತಾದ ನಂತರ ಆತಂಕಗೊಂಡು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮತ್ತು ಪದವಿ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಗಾರ್ಲಾ ಮಂಡಲ್​ನ ವಾಡ್ಲಾ ತಾಂಡದಲ್ಲಿ ಈ ಘಟನೆ ನಡೆದಿದೆ.

ಪ್ರಶಾಂತ್​ (17) ಮತ್ತು ಪ್ರವೀಣಾ (21) ಮೃತರು. ಖಮ್ಮಂ ಜಿಲ್ಲೆಯ ಶಾಲೆಯೊಂದರಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಪ್ರಶಾಂತ್ ಮತ್ತು ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರವೀಣಾ ಕೆಲ ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ರಹಸ್ಯವಾಗಿ ಉಳಿದಿದ್ದ ಇವರ ಪ್ರೀತಿಯ ವಿಷಯ ಪೋಷಕರಿಗೆ ಗೊತ್ತಾದ ಕಾರಣ, ಭೀತಿಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದರು. ಹೀಗಾಗಿ, ಸೋಮವಾರ ರಾತ್ರಿ ಮನೆಯಿಂದ ಪ್ರೇಮಿಗಳು ತಾಂಡಾದ ಹೊಲದಲ್ಲಿದ್ದ ಬಾವಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ನಂತರ ಅಕ್ಕಪಕ್ಕದವರಿಗೆ ವಿಷಯ ಗೊತ್ತಾಗಿ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ಘಟನೆ ಕಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಗಾರ್ಲಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
PublicNext

PublicNext

24/12/2020 10:26 am

Cinque Terre

59.9 K

Cinque Terre

1