ಸಿರುಗುಪ್ಪ: ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಅವರ ಪತ್ನಿ ಶಂಕ್ರಮ್ಮ (50) ನೇಣಿಗೆ ಶರಣಾಗಿದ್ದಾರೆ. ಗುರುವಾರ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸರ್ಕಾರಿ ವಸತಿ ಗೃಹದಲ್ಲೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್. ಬಿ ಕೂಡಲಗಿ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಗೆ ನಿಯೋಜಿಸಲಾಗಿತ್ತು. ಸಿರುಗುಪ್ಪ ಶಾಸಕ ಎಂಎಸ್.ಸೋಮಲಿಂಗಪ್ಪ ಭೇಟಿ ನೀಡಿ ಸಾಂತ್ವನ ಹೇಳಿದರು. ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
24/12/2020 11:40 am