ಲಕ್ನೋ : ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ತನ್ನ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದಾಗ ಪೋಲಿಸ್ ಅಧಿಕಾರಿ ಆಕೆಯ ಮೇಲೆ ಮತ್ತೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಆರೋಪಿಸಿರುವ ಘಟನೆ ಉತ್ತರಪ್ರದೇಶದ ಉತ್ತರಪ್ರದೇಶದ ಶಹಜಾನ್ ಪುರದಲ್ಲಿ ನಡೆದಿದೆ.
ಸದ್ಯ ಮಹಿಳೆ ದೂರಿನನ್ವಯ ಹಿರಿಯ ಪೊಲೀಸ್ ಅಧಿಕಾರಿ ಅವಿನಾಶ್ ಚಂದ್ರ ಸೂಕ್ತ ತನಿಖೆಗೆ ಆದೇಶ ನೀಡಿದ್ದಾರೆ.
ನವೆಂಬರ್ 30 ರಂದು ಜಲಾಲಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯ ನಿವಾಸಿ 35 ವರ್ಷದ ಮಹಿಳೆಯನ್ನು ಐವರು ಪುರುಷರು ಕಾರಿನಲ್ಲಿ ಬಲವಂತವಾಗಿ ಹೊತ್ತೊಯ್ದು ಅತ್ಯಾಚಾರ ಎಸಗಿದ್ದಾರೆ, ಈ ಸಂಬಂಧ ಮಹಿಳೆ ಜಲಾಲಾಬಾದ್ ಠಾಣೆಗೆ ದೂರು ನೀಡಲು ಹೋಗಿದ್ದಾಗ ಸಬ್ ಇನ್ಸ್ಪೆಕ್ಟರ್ ಕೂಡ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆಕೆ ಆರೋಪಿಸಿದ್ದಾಳೆ.
PublicNext
24/12/2020 10:07 pm