ಶಿವಮೊಗ್ಗ: ಕಳೆದ ಎಂಟು ತಿಂಗಳಿನಿಂದ ಮನೆಯ ಮುಂದೆ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶಿವಮೊಗ್ಗದ ಗುರುವಿನಪುರದಲ್ಲಿ ನಡೆದಿದೆ.
ಗುರುವಿನಪುರದ ನಿವಾಸಿ ಶಿವು ಎಂಬವರಿಗೆ ಸೇರಿದ ಖಾಸಗಿ ಬಸ್ ಇದಾಗಿದ್ದು, ಕೊರೊನಾ ಹಿನ್ನೆಲೆಯಲ್ಲಿ ಕಳೆದ 8 ತಿಂಗಳಿನಿಂದ ಬಸ್ ಮನೆಯ ಎದುರಿನಲ್ಲಿಯೇ ನಿಂತಿತ್ತು. ಬಸ್ಸಿಗೆ ಬೆಂಕಿ ಹತ್ತಲು ಕಾರಣವೇನು ಎಂಬುದೇ ಗೊಂದಲಕ್ಕೀಡಾಗಿದೆ. ಸ್ಥಳಕ್ಕೆ ಅಗ್ನಿಶಾಮಕದಳ ದೌಡಾಯಿಸಿ ಬೆಂಕಿ ನಂದಿಸಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
PublicNext
25/12/2020 08:27 am