ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಟ್ನಾದಲ್ಲಿ ಬಿಜೆಪಿ ಮುಖಂಡನ ಹತ್ಯೆ

ಪಾಟ್ನಾ : ಬಿಹಾರ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ರಾಜಕೀಯ ಪಕ್ಷಗಳು ತಯಾರಿಯನ್ನು ಆರಂಭಿಸಿವೆ. ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಬಿಜೆಪಿ ನಾಯಕನನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಕೆಲವು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಭಾರತೀಯ ಜನತಾಪಕ್ಷದ ಜಯಂತ್ ಮಂಡಲ್ ಉಪಾಧ್ಯಕ್ಷ ರಾಜೇಶ್ ಕುಮಾರ್ ಅಲಿಯಾಸ್ ರಾಜು ಬಾಬಾ ಎಂಬವರನ್ನು ಹತ್ಯೆಗೈದಿದ್ದಾರೆ.

ಕೇವಲ ಎರಡು ದಿನದ ಹಿಂದಷ್ಟೇ ರಾಜು ಬಾಬಾ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

ಗುರುವಾರ ಮುಂಜಾನೆಯ ವಾಯುವಿಹಾರಕ್ಕೆ ಹೊರಟಿದ್ದ ಸಂದರ್ಭದಲ್ಲಿ ಗುಂಡಿಟ್ಟು ಹತ್ಯೆಗೈಯಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆಯನ್ನು ಆರಂಭಿಸಿದ್ದಾರೆ.

ಹಂತಕರ ಪತ್ತೆಗಾಗಿ ಪಾಟ್ನಾ ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

01/10/2020 01:27 pm

Cinque Terre

87.52 K

Cinque Terre

2