ಬೆಂಗಳೂರು: ನಗರದ ವೀರಸ್ವಾಮಿ ಲೇಔಟ್ ನಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
HALನಲ್ಲಿ ಕೆಲಸ ಮಾಡುತ್ತಿದ್ದ 35 ವರ್ಷದ ರಾಜೇಶ್ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.
ರಾಜೇಶ್ ಬೈಕ್ ಹಿಂಬಾಲಿಸಿ ಬಂದ ಹಂತಕರು ಚಾಕುವಿನಿಂದ ಇರಿದು ಕೊಲೆಗೈದಿದ್ದಾರೆ.
ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
ಸ್ಥಳಕ್ಕಾಗಮಿಸಿದ ಕಾಡುಗೋಡಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
PublicNext
20/09/2020 06:57 pm