ಬೆಂಗಳೂರು: ಕಾಫಿ ವ್ಯಾಪಾರದಲ್ಲಿ ನಷ್ಟ ಅನುಭವಿಸಿದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೂಲದ ಉದ್ಯಮಿಯೊಬ್ಬರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಾಕೀರ್ ಅಹ್ಮದ್ ಆತ್ಮಹತ್ಯೆಗೆ ಶರಣಾದ ಉದ್ಯಮಿ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ನಿವಾಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಂದು ಕೋಟಿಗೂ ಹೆಚ್ಚು ಮೊತ್ತದ ನಷ್ಟ ಅನುಭವಿಸಿದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಖಾಸಗಿ ಲಾಡ್ಜ್ ನಲ್ಲಿ ಇದ್ದ ಶಾಕೀರ್ ನಿನ್ನೆ ಸೋಮವಾರ ಮದ್ಯಾಹ್ನ ಊಟಕ್ಕೆ ಕೋಣೆಯಿಂದ ಹೊರ ಬರದಿದ್ದಾಗ ಲಾಡ್ಜ್ ಸಿಬ್ಬಂದಿ ಅನುಮಾನಗೊಂಡು ಪರಿಶೀಲಿಸಿದ್ದರು. ನೇಣುಬಿಗಿದ ಸ್ಥಿತಿಯಲ್ಲಿ ಶಾಕೀರ್ ಅಹ್ಮದ್ ಮೃತದೇಹ ಪತ್ತೆಯಾಗಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿಗೆ ಇನ್ನೂ ಹಲವು ಕಾರಣಗಳಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
PublicNext
03/08/2021 12:36 pm