ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎನ್‌ಎಸ್‌ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅರೆಸ್ಟ್

ನವದೆಹಲಿ: ರಾಷ್ಟ್ರೀಯ ಷೇರು ಮಾರುಕಟ್ಟೆ (ಎನ್‌ಎಸ್‌ಇ) ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಭಾನುವಾರ ತಡರಾತ್ರಿ ದೆಹಲಿಯಲ್ಲಿ ಬಂಧಿಸಿದೆ. ಚಿತ್ರಾ ರಾಮಕೃಷ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಿಬಿಐ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.

ಚಿತ್ರಾ ರಾಮಕೃಷ್ಣ ಅವರು ಅಪರಿಚಿತ ಹಾಗೂ - ಮುಖಗುರುತು ಇಲ್ಲದ ಹಿಮಾಲಯನ್‌ ಯೋಗಿಯೊಬ್ಬರ ಮಾತಿಗೆ ಕಟ್ಟು ಬಿದ್ದಿದ್ದರು. ಸುಮಾರು 20 ವರ್ಷಗಳಿಂದ ಚಿತ್ರಾ ರಾಮಕೃಷ್ಣ ಅವರು ಯೋಗಿಯೊಂದಿಗೆ ಇಮೇಲ್ ಮೂಲಕ ಸಂವಹನ ನಡೆಸಿದ್ದರು. ಆ ಯೋಗಿಯೇ ಆನಂದ್ ಸುಬ್ರಮಣಿಯನ್ ಅವರ ನೇಮಕಕ್ಕೆ ಚಿತ್ರಾಗೆ ಮಾರ್ಗದರ್ಶನ ನೀಡಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ.

Edited By : Vijay Kumar
PublicNext

PublicNext

07/03/2022 07:35 am

Cinque Terre

81.24 K

Cinque Terre

3