ನವದೆಹಲಿ: ಎನ್ಎಸ್ಇ ಕೊ-ಲೊಕೇಶನ್ ಹಗರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಚಿತ್ರಾ ರಾಮಕೃಷ್ಣ ಅವರ ವಿಚಾರಣೆಗಾಗಿ ಏಳು ದಿನಗಳ ಕಾಲ ಸಿಬಿಐಗೆ ಕಸ್ಟಡಿಯಲ್ ಒಪ್ಪಿಸಿ ದೆಹಲಿ ನ್ಯಾಯಾಲಯ ಆದೇಶ ನೀಡಿದೆ.
ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದ ನಂತರ ನವದೆಹಲಿಯಲ್ಲಿ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಭಾನುವಾರ ತಡರಾತ್ರಿ ಬಂಧಿಸಿತ್ತು. 'ಹಿಮಾಲಯನ್ ಯೋಗಿ' ಜತೆ ಗೌಪ್ಯ ಮಾಹಿತಿ ಹಂಚಿಕೊಂಡ ಆರೋಪ ಹೊತ್ತಿರುವ ರಾಮಕೃಷ್ಣ ಅವರನ್ನು 14 ದಿನಗಳ ಕಸ್ಟಡಿಗೆ ನೀಡುವಂತೆ ತನಿಖಾ ಸಂಸ್ಥೆ ಕೋರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ದೆಹಲಿ ಕೋರ್ಟ್, ಚಿತ್ರಾ ರಾಮಕೃಷ್ಣರನ್ನು 7 ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ.
PublicNext
07/03/2022 04:52 pm