ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಭೀಕರ ರಸ್ತೆ ಅಪಘಾತ- ಸುಶಾಂತ್ ಸಿಂಗ್ ಕುಟುಂಬದ ಐವರು ಸಾವು

ಪಾಟ್ನಾ: ಭೀಕರ ರಸ್ತೆ ಅಪಘಾತದಲ್ಲಿ ದಿವಂಗತ ಬಾಲಿವುಡ್‌ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬದ ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಬಿಹಾರದ ಲಖಿಸರಾಯ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 333ರಲ್ಲಿ ಇಂದು (ಮಂಗಳವಾರ) ಈ ಘಟನೆ ಸಂಭವಿಸಿದೆ. ಸುಶಾಂತ್ ಸಿಂಗ್ ಕುಟುಂಬಸ್ಥರು ಹರಿಯಾಣದ ಹಿರಿಯ ಪೊಲೀಸ್ ಅಧಿಕಾರಿ ಒಪಿ ಸಿಂಗ್ ಅವರ ಸಹೋದರಿ ಗೀತಾ ದೇವಿಯ ಅಂತ್ಯಕ್ರಿಯೆ ಮುಗಿಸಿ ಪಾಟ್ನಾದಿಂದ ಹಿಂತಿರುಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಸುಶಾಂತ್ ಸಿಂಗ್ ಕುಟುಂಬಸ್ಥರಿದ್ದ ವಾಹನವು ಟ್ರಕ್‌ಗೆ ಡಿಕ್ಕಿ ಹೊಡೆದು, ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Edited By : Vijay Kumar
PublicNext

PublicNext

16/11/2021 04:49 pm

Cinque Terre

55.04 K

Cinque Terre

14