ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನ್ಯಾಯಾಲಯವು ಭಾರತಿ ಸಿಂಗ್ ಮತ್ತು ಅವರ ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಡಿಸೆಂಬರ್ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ದಂಪತಿಯನ್ನು ಮಾದಕವಸ್ತು ನಿಯಂತ್ರಣ ದಳದ (ಎನ್‌ಸಿಬಿ) ಬಂಧಿಸಿದೆ. ಎನ್‌ಸಿಬಿ ಅಧಿಕಾರಿಗಳು ಶನಿವಾರವಷ್ಟೇ ಹಾಸ್ಯನಟಿ ಭಾರತಿ ಸಿಂಗ್ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ 86.5 ಗ್ರಾಂ ಮಾದಕ ವಸ್ತು ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಜೊತೆಗೆ ಹರ್ಷ್ ಅವರನ್ನು ವಿಚಾರಣೆಗೆ ನಡೆಸಿದ ಬಳಿಕ ಇಂದು ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿತ್ತು.
ಎನ್‌ಸಿಬಿ ಅಧಿಕಾರಿಗಳು ಆರೋಪಿಗಳನ್ನು ಇಂದು ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
PublicNext
22/11/2020 03:36 pm