ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಷ್ಣು ದಾದಾಗೆ ಅವಮಾನ: ಕ್ರಮಕ್ಕೆ ಆಗ್ರಹ

ಸಾಹಸಸಿಂಹ ವಿಷ್ಣುವರ್ಧನ್ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ನಟನೊಬ್ಬ ವಿಷ್ಣು ಫ್ಯಾನ್ಸ್ ಕೆಂಗಣ್ಣಿಗೆ ಬಿದ್ದಿದ್ದಾರೆ. ಈ ಸಂಬಂಧ ಡಾ ವಿಷ್ಣು ಸೇನಾ ಸಮತಿಯ ಸದಸ್ಯರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಿದ್ದು, ಆ ನಟನ ವಿರುದ್ಧ ಕ್ರಮ ಜರುಗಿಸಿ ಎಂದು ಮನವಿ ಮಾಡಿದ್ದಾರೆ.

ತೆಲುಗು ಚಿತ್ರರಂಗದ ಹಿರಿಯ ನಟ ವಿಜಯ್ ರಂಗರಾಜು ಅಕ್ಟೋಬರ್ ತಿಂಗಳಿನಲ್ಲಿ ತೆಲುಗು ಮಾಧ್ಯಮವೊಂದಕ್ಕೆ ನೀಡಿರುವ ಸಂರ್ದಶನದಲ್ಲಿ ವಿಷ್ಣುವರ್ಧನ್ ಅವರ ಬಗ್ಗೆ ಬಹಳ ಕೆಟ್ಟದಾಗಿ ಮಾತನಾಡಿದ್ದಾರೆ. ಇದು ಸಹಜವಾಗಿ ಕನ್ನಡಾಭಿಮಾನಿಗಳು ಮತ್ತು ಸಾಹಸ ಸಿಂಹ ಅಭಿಮಾನಿಗಳನ್ನು ಕೆರಳಿಸಿದೆ.

ವಿಷ್ಣುವರ್ಧನ್ ಅವರ ವ್ಯಕ್ತಿತ್ವದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಜಯ ರಂಗರಾಜು ಅವರನ್ನು ವಿಷ್ಣು ಅಭಿಮಾನಿಗಳು ಹುಚ್ಚ ಇರಬೇಕು ಎಂದು ಟೀಕಿಸುತ್ತಿದ್ದಾರೆ. ಕನ್ನಡಿಗರ ಪಾಲಿನ ಹೃದಯವಂತನ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾನೆ, ಈತ ಪ್ರಚಾರಕ್ಕಾಗಿ ದಾದಾ ಹೆಸರು ಬಳಸಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By : Nagaraj Tulugeri
PublicNext

PublicNext

08/12/2020 03:10 pm

Cinque Terre

81.44 K

Cinque Terre

7