ಬೆಂಗಳೂರು : ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸಹೋದರ ದೀಪಕ್ ಕೊಲೆಗೆ ಸ್ಕೆಚ್ ಹಾಕಿದ್ದ 7 ಜನರನ್ನು ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೀಪಕ್ ಮೇಲೆ ಮಾರಣಾಂತಿಕ ಹಲ್ಲೆ ಮಾಡುವ ಬಗ್ಗೆ ಆರೋಪಿ ಮಂಜುನಾಥ್ ಹಾಗೂ ಆತನ ಸಹಚರರು ಸ್ಕೆಚ್ ಹಾಕುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.
ಸುಳಿವು ಸಿಕ್ಕ ಕೂಡಲೇ ದಾಳಿ ಮಾಡಿದ್ದ ಜಯನಗರ ಪೊಲೀಸರು ಸದ್ಯ ಏಳು ಜನರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಜೊತೆಗೆ, ನಿರ್ಮಾಪಕ ಉಮಾಪತಿಯವರ ಅಣ್ಣನಿಗೆ ಘಟನೆಯ ಬಗ್ಗೆ ಮಾಹಿತಿ ಸಹ ನೀಡಿದ್ದಾರೆ.
ರೌಡಿಶೀಟರ್ ಪಳನಿ ಗ್ಯಾಂಗ್ ಗೆ ಸೇರಿರುವ ನೀಲಸಂದ್ರ ನಿವಾಸಿಯಾದ ಮಂಜುನಾಥ್ ನಿಂದ ಕೃತ್ಯಕ್ಕೆ ಪ್ಲಾನ್ ನಡೆದಿದೆ ಎಂದು ಹೇಳಲಾಗಿದೆ.
ಯಾವ ಕಾರಣಕ್ಕೆ ಕೊಲೆಗೆ ಸ್ಕೆಚ್ ಹಾಕಲಾಗಿತ್ತು ಎಂಬುದರ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ದಕ್ಷಿಣ ವಿಭಾಗ DCP ಹರೀಶ್ ಪಾಂಡೆ ಮಾಹಿತಿ ನೀಡಿದ್ದಾರೆ.
PublicNext
21/12/2020 09:27 am