ಮುಂಬೈ: ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ರಕುಲ್ ಪ್ರೀತ್ ಸಿಂಗ್ ಮತ್ತು ಸಾರಾ ಅಲಿ ಖಾನ್ ಗೆ ಎನ್‍ಸಿಬಿ ಸಮನ್ಸ್ ನೀಡಿರೋದು ಅಧಿಕೃತವಾಗಿ ದೃಢಪಟ್ಟಿದೆ. ಮೃತ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ ಸಮನ್ಸ್ ನೀಡಿದೆ.
ಶ್ರದ್ಧಾ ಕಪೂರ್, ಸಾರಾ ಆಲಿಖಾನ್, ರಿಯಾ ಚಕ್ರವರ್ತಿ ಜೊತೆ ವಾಟ್ಸಪ್ ಚಾಟಿಂಗ್ ನಡೆಸಿದ್ದ ಟಾಲಿವುಡ್ನ ಬೇಡಿಕೆ ನಟಿ ರಕುಲ್ ಪ್ರೀತ್ ಸಿಂಗ್ಗೂ ಸಮನ್ಸ್ ಜಾರಿಯಾಗಿದೆ. ಈ ಪ್ರಕರಣದಲ್ಲಿ ಮಾಧ್ಯಮಗಳು ತಮ್ಮ ಹೆಸರನ್ನು ವರದಿ ಮಾಡುತ್ತಿರುವುದರ ತಡೆ ಕೋರಿ ರಕುಲ್ ದೆಹಲಿ ನ್ಯಾಯಾಲಯದ ಮೆಟ್ಟಿಲತ್ತಿದ್ದರು. ಈ ವಿಚಾರ ನ್ಯಾಯಾಲಯದ ಅಂಗಳದಲ್ಲಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು ಮೂರು ದಿನದೊಳಗೆ ಹಾಜರಾಗಿ ವಿವರಣೆ ನೀಡುವಂತೆ ನಟಿಯರಿಗೆ ಸೂಚನೆ ನೀಡಿದ್ದಾರೆ.
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು, ಸೆಪ್ಟೆಂಬರ್ ೨೫ರಂದು ವಿಚಾರಣೆಗೆ ಹಾಜರಾಗುವಂತೆ ದೀಪಿಕಾ ಪಡುಕೋಣೆಗೆ ಸಮನ್ಸ್ ನೀಡಿದ್ದಾರೆ. ಜೊತೆಗೆ ಶ್ರದ್ಧಾ ಕಪೂರ್ ಮತ್ತು ಸಾರಾ ಆಲಿಖಾನ್ ಅವರಿಗೆ ಸೆಪ್ಟೆಂಬರ್ ೨೬ರಂದು ವಿಚಾರಣೆಗೆ ಬರುವಂತೆ ಸಮನ್ಸ್ ಜಾರಿಗೊಳಿಸಿದ್ದಾರೆ.
PublicNext
23/09/2020 06:30 pm