ಬೆಂಗಳೂರು: ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಪ್ರತಿಷ್ಠಾಪನೆ ಮಾಡಲಾಗಿದ್ದ ಡಾ. ವಿಷ್ಣುವರ್ಧನ್ ಪ್ರತಿಮೆಯನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿ ವಿಕೃತಿ ಮೆರೆದಿದ್ದು, ಈ ಬಗ್ಗೆ ನಟ ದರ್ಶನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ವಿಟರ್ನಲ್ಲಿ ಧ್ವಂಸಗೊಂಡ ಪ್ರತಿಮೆಯ ಫೋಟೋಗಳನ್ನು ಹಾಕಿರುವ ನಟ ದರ್ಶನ್ ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸೋ, ಆರಾಧಿಸೋ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ನಮ್ಮ ನಲ್ಮೆಯ ಸಾಹಸ ಸಿಂಹ ಡಾ. ವಿಷ್ಣು ಸರ್ ಪುತ್ಥಳಿಯನ್ನು ಯಾರೋ ಕಿಡಿಗೇಡಿಗಳು ಯಾರೂ ಇಲ್ಲದ ಹೊತ್ತಿನಲ್ಲಿ ಧ್ವಂಸ ಮಾಡಿರುವುದು ನಾಚಿಕೆಗೇಡಿನ ಸಂಗತಿ. ಇಂತ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು ಎಂದಿದ್ದಾರೆ.
PublicNext
26/12/2020 09:30 pm