ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿಗೆ ಇಂದು ಕೂಡ ಜಾಮೀನು ದೊರೆತಿಲ್ಲ.
ನಟಿ ರಾಗಿಣಿ ಜಾಮೀನು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ತ್ರಿಸದಸ್ಯ ಪೀಠವು ಮುಂದೂಡಿದೆ.
ಜಾಮೀನು ಕೋರಿ ರಾಗಿಣಿಯು ಈ ಮೊದಲು ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ರಾಜ್ಯ ಹೈಕೋರ್ಟ್ ರಾಗಿಣಿ ಅರ್ಜಿಯನ್ನು ವಜಾಗೊಳಿಸಿತು. ಇದನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್, ನವೀನ್ ಸಿನ್ಹಾ ಮತ್ತು ಇಂದು ಮಲ್ಹೋತ್ರಾ ಅವರುಗಳು ರಾಗಿಣಿ ಹಾಗೂ ಶಿವಪ್ರಕಾಶ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದ್ದಾರೆ.
PublicNext
08/01/2021 03:11 pm