ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಸ್ಯಾಂಡಲ್ವುಡ್ ಸ್ಚೀಟಿ ರಾಧಿಕಾ ಇಂದು ಸಿಸಿಬಿ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗಿದ್ದಾರೆ. ಸಿಸಿಬಿ ಅಧಿಕಾರಿಗಳು ಸುಮಾರು 4 ಗಂಟೆಗಳ ಕಾಲ ರಾಧಿಕಾ ಅವರನ್ನು ಕೋಟ್ಯಾಂತರ ರೂ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಕೇಳಿ ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ಎದುರಿಸಿ ಹೊರಬಂದ ರಾಧಿಕಾ, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಿಸಿಬಿ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ನನ್ನನ್ನು ಹಾಗೂ ಯುವರಾಜ್ ಅವರನ್ನೂ ಪ್ರತ್ಯೇಕವಾಗಿ ಕೂರಿಸಿ ವಿಚಾರಣೆ ನಡೆಸಲಾಗಿದೆ. ಸಿಸಿಬಿ ಅಧಿಕಾರಿಗಳು ಮತ್ತೆ ವಿಚಾರಣೆಗೆ ಕರೆದರೆ ಖಂಡಿತ ಬರ್ತೀನಿ. ನಾನು ಬೆಂಗಳೂರಿನಲ್ಲೇ ಇರ್ತೀನಿ. ಬೆಂಗಳೂರು ಬಿಟ್ಟು ಎಲ್ಲಿಗೂ ಹೋಗಲ್ಲ ಎಂದಿದ್ದಾರೆ.
PublicNext
08/01/2021 03:29 pm