ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಬಿಗ್ ಬಾಸ್ ಶೋನಿಂದಲೇ ಪ್ರಖ್ಯಾತಿಯನ್ನು ಗಳಿಸಿಕೊಂಡಿದ್ದರು.
ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವಂತ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು, ನಿನ್ನೆ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
PublicNext
25/01/2021 01:30 pm