ಚೆನ್ನೈ: ತಮಿಳು ನಟ ಇಂದ್ರಕುಮಾರ್ ನಿನ್ನೆ ಮಧ್ಯರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ನಿನ್ನೆ ಸ್ನೇಹಿತನ ಮನೆಯಲ್ಲಿಯೇ ಉಳಿದುಕೊಂಡಿದ್ದ ಇಂದ್ರಕುಮಾರ್ ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇದುವರೆಗೆ ತಿಳಿದುಬಂದಿಲ್ಲ.
ಚಿತ್ರನೋಡಿ ಸ್ನೇಹಿತನ ಮನೆಯಲ್ಲಿಯೇ ಉಳಿದುಕೊಂಡಿದ್ದ ಇಂದ್ರಕುಮಾರ್ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸ್ನೇಹಿತರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಶವವನ್ನು ಫ್ಯಾನಿಂದ ಇಳಿಸಿ, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಇಂದ್ರಕುಮಾರ್ ಶ್ರೀಲಂಕಾ ಮೂಲಕದವರು. ತಮಿಳಿನ ಕೆಲವೊಂದು ಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಉತ್ತಮ ಅವಕಾಶಕ್ಕಾಗಿ ಸಿಗದೆ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಪೊಲೀಸ ವರದಿ ಬಳಿಕ ನಿಕರ ಮಾಹಿತಿ ತಿಳಿಯಲಿದೆ.
PublicNext
20/02/2021 01:21 pm