ಬೆಂಗಳೂರು: 'ಲವ್ ಯು ರಚ್ಚು' ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಎಂಬಾತನಿಗೆ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾನೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಂಜಿತ್ ಎಂಬ ಯುವಕನ ಸ್ಥಿತಿ ಚಿಂತಾಜನಕವಾಗಿದೆ.
ಸದ್ಯ ರಂಜಿತ್ಗೆ ಆರ್.ಆರ್. ಆಸ್ಪತ್ರೆಯ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗ್ತಿದೆ ಎಂದ ಮಾಹಿತಿ ಲಭ್ಯವಾಗಿದೆ. ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ 'ಲವ್ ಯೂ ರಚ್ಚು' ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಕ್ರೇನ್ ಎತ್ತುವ ಸಮಯದಲ್ಲಿ ವಿದ್ಯುತ್ ತಂತಿಗೆ ಕ್ರೇನ್ ತಗುಲಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ವಿವೇಕ್ ಸಾವನ್ನಪ್ಪಿದ್ದರೆ ಇತ್ತ ರಂಜಿತ್ ಎಂಬ ಸಹಾಯಕನಿಗೂ ಸಹ ಗಂಭೀರ ಗಾಯವಾಗಿದೆ. ಸದ್ಯ ರಂಜಿತ್ಗೆ ಆರ್.ಆರ್. ಆಸ್ಪತ್ರೆಯ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದ ಮಾಹಿತಿ ಲಭ್ಯವಾಗಿದೆ.
PublicNext
09/08/2021 07:21 pm