ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ ಕುಂದ್ರಾ ಬ್ಲ್ಯೂ ಫಿಲಂ ಕೇಸ್: ತನಿಖೆಗಾಗಿ ಎಸ್ಐಟಿ ರಚನೆ

ಮುಂಬೈ: ಅಶ್ಲೀಲ ಚಿತ್ರಗಳ ತಯಾರಿಕೆ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಸದ್ಯ ಪೊಲೀಸ್ ತನಿಖೆ ಎದುರಿಸುತ್ತಿದ್ದಾರೆ. ಈ ಪ್ರಕರಣದ ತನಿಖೆಗಾಗಿ ಮುಂಬೈ ಪೊಲೀಸರು ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಮಾಹಿತಿ ನೀಡಲಾಗಿದ್ದು, ಸಹಾಯಕ ಪೊಲೀಸ್ ಆಯುಕ್ತರ (ಎಸಿಪಿ) ಶ್ರೇಣಿಯ ಅಧಿಕಾರಿಯೊಬ್ಬರು ಈ ಪ್ರಕರಣದಲ್ಲಿ ಎಸ್‌ಐಟಿ ತಂಡವನ್ನು ಮುನ್ನಡೆಸಲಿದ್ದಾರೆ. ಹೊಸದಾಗಿ ರೂಪುಗೊಂಡ ಎಸ್‌ಐಟಿ ಅಶ್ಲೀಲ ಚಿತ್ರ ಪ್ರಕರಣದಲ್ಲಿ ಪ್ರತ್ಯೇಕವಾಗಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ತನಿಖೆ ಮಾಡಲಿದೆ. ತಂಡವು ಕ್ರೈಂ ಬ್ರಾಂಚ್‌ನ ಉನ್ನತ ಅಧಿಕಾರಿಗಳಿಗೆ ವರದಿ ಮಾಡುತ್ತದೆ ಎಂದು ಹೇಳಲಾಗಿದೆ.

Edited By : Nagaraj Tulugeri
PublicNext

PublicNext

13/08/2021 06:10 pm

Cinque Terre

53.8 K

Cinque Terre

0