ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಭಾರಿ ಸಂಚಲನ ಮೂಡಿಸಿದ್ದ ಡ್ರಗ್ಸ್ ಪ್ರಕರಣ ರೋಚಕ ಟ್ವಿಸ್ಟ್ ಪಡೆದುಕೊಂಡಿದೆ.
ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ 10ಕ್ಕೂ ಹೆಚ್ಚು ಮಂದಿಯ ತಲೆ ಕೂದಲಿನ ಸ್ಯಾಂಪಲ್ಗಳನ್ನು ಹೈದರಾಬಾದ್ ಎಫ್ಎಸ್ಎಲ್ ಕೇಂದ್ರಕ್ಕೆ ಕಳಿಸಲಾಗಿತ್ತು. ಸದ್ಯ ರಾಗಿಣಿ ಹಾಗೂ ಸಂಜನಾ ವರದಿ ಹೊರ ಬಿದ್ದಿದ್ದು, ಇಬ್ಬರೂ ಡ್ರಗ್ಸ್ ಸೇವಿಸಿದ್ದು ದೃಢಪಟ್ಟಿದೆ ಎಂಬ ಮಾಹಿತಿ ಲಭಿಸಿದೆ.
ಮಾದಕ ವಸ್ತು ಜಾಲದ ಜೊತೆ ನಂಟು ಹೊಂದಿದ್ದರು ಎಂಬ ಆರೋಪದ ಮೇಲೆ ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಸೇರಿ ಮುಂತಾದವರನ್ನು ಪೊಲೀಸರು ಬಂಧಿಸಿದ್ದರು. ಹಲವು ತಿಂಗಳು ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆದ ಬಳಿಕ ಅವರು ಜಾಮೀನು ಪಡೆದು ಹೊರಬಂದಿದ್ದಾರೆ. ಈ ಮಧ್ಯೆ ಸಿಸಿಬಿ ಪೊಲೀಸರು ಆರೋಪಿಗಳ ಹೇರ್ ಸ್ಯಾಂಪಲ್, ರಕ್ತದ ಮಾದರಿ ಮತ್ತು ಯೂರಿನ್ ಸ್ಯಾಂಪಲ್ ಸಂಗ್ರಹ ಮಾಡಿ ಹೈದರಾಬಾದ್ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಹೇರ್ ಸ್ಯಾಂಪಲ್ ಕಳಿಸಿಕೊಟ್ಟಿದ್ದರು. ಸುಮಾರು ಹತ್ತು ತಿಂಗಳ ಬಳಿಕ ಸಿಸಿಬಿ ಪೊಲೀಸರಿಗೆ ಎಫ್ಎಸ್ಎಲ್ ರಿಪೋರ್ಟ್ ಕೈಸೇರಿದೆ. ಎಫ್‍ಎಸ್‍ಎಲ್ ವರದಿಯಲ್ಲಿ ಇಬ್ಬರೂ ನಟಿಯರು ಡ್ರಗ್ಸ್ ಸೇವನೆ ಮಾಡಿರೋದು ದೃಢವಾಗಿರುವ ಮಾಹಿತಿ ಲಭ್ಯವಾಗಿದೆ.
PublicNext
24/08/2021 10:26 am