ಬೆಂಗಳೂರು: ಮೈಸೂರಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ಕುರಿತಾಗಿ ನಟಿ ಶ್ರುತಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ ಎಂದು ಪ್ರಶ್ನಿಸಿದ್ದಾರೆ.
ಪೋಸ್ಟ್‌ನಲ್ಲಿ ಏನಿದೆ?:
"ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ? ಇಂತಹ ಪುರುಷರ ಮನಸ್ಥಿತಿ ಬದಲಾಗುವುದು ಯಾವಾಗ? ಕಾಮುಕರನ್ನ ಬಂಧಿಸುವ ಕಾನೂನು ಮತ್ತಷ್ಟು ಗಟ್ಟಿಯಾಬೇಕು. ಇಂಥಹ ಪುರುಷರು ಬೆಳೆಯುವ ಮನೆಯ ವಾತಾವರಣ, ಸಂಸ್ಕಾರ ಪೋಷಕರ ಜವಾಬ್ದಾರಿಯೂ ಆಗಿರುತ್ತದೆ. ಹುಟ್ಟಿನಿಂದ ಸಾವಿನವರೆಗೆ ಹೆಣ್ಣುಮಕ್ಕಳು ಅನುಭವಿಸುವ ಕಷ್ಟ ನೂರಾರು ಆಗಿದೆ. ಹಲವಾರು ಮಹಿಳೆಯರು ಅದನ್ನು ಹಿಮ್ಮೆಟ್ಟಿ ಇಡೀ ಭಾರತವೇ ಮೆಚ್ಚುವಂತ ಸಾಧನೆಯನ್ನು ಮಾಡುತ್ತಿದ್ದಾರೆ. ಸಾಮೂಹಿಕ ಅತ್ಯಾಚಾರದ ಘಟನೆಗಳು ಮಹಿಳೆಯ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸುವಂತಾಗುತ್ತದೆ ಇದು ಆಗದಿರಲಿ" ಎಂದು ಶ್ರುತಿ ಬರೆದುಕೊಂಡಿದ್ದಾರೆ.
PublicNext
27/08/2021 03:06 pm