ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿಚ್ಚ ಸುದೀಪ್ ಕಟೌಟ್​ಗೆ ಕೋಣನ ರಕ್ತಾಭಿಷೇಕ.!

ಬಳ್ಳಾರಿ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬ ಹಿನ್ನೆಲೆ ಅವರ ಅಭಿಮಾನಿಗಳು ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿ ಗ್ರಾಮದಲ್ಲಿ ಕೋಣವನ್ನು ಬಲಿ ನೀಡಿ ರಕ್ತಾಭಿಷೇಕ ಮಾಡಿದ್ದಾರೆ. ಇದು ಭಾರಿ ಚರ್ಚೆಗೆ ಕಾರಣವಾಗಿದೆ.

ಬಂಡ್ರಿ ಗ್ರಾಮದಲ್ಲಿ ಸುದೀಪ್ ಅವರ ಅಭಿಮಾನಿಗಳು ಕಿಚ್ಚನ ಕಟೌಟ್ ಮುಂದೆ ಕೋಣವನ್ನು ಬಲಿ ನೀಡಿ ಹುಟ್ಟಹಬ್ಬವನ್ನು ಆಚರಿಸಿದ್ದಾರೆ. ಸ್ಥಳದಲ್ಲಿದ್ದ ಕೆಲವರು ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಸುದೀಪ್ ಅಭಿಮಾನಿಗಳಿಂದ ಪ್ರಾಣಿ ಹಿಂಸೆ ಆಗಿರುವುದು ಪ್ರಾಣಿದಯಾ ಸಂಘದಿಂದ ಆಕ್ಷೇಪ ವ್ಯಕ್ತವಾಗಿದೆ. ಹುಟ್ಟುಹಬ್ಬ ಸಂದರ್ಭದಲ್ಲಿ ಈ ರೀತಿಯಾಗಿ ಹುಚ್ಚಾಟ ಮೆರೆಯುವುದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By : Vijay Kumar
PublicNext

PublicNext

02/09/2021 06:27 pm

Cinque Terre

87.19 K

Cinque Terre

25