ಮಂಗಳೂರು: ಡ್ಯಾನ್ಸ್ ಮಾಡುವಾಗ ಸುಸ್ತಾಗಬಾರದೆನ್ನುವ ಕಾರಣಕ್ಕೆ ಕನ್ನಡದ ಖ್ಯಾತ ನಿರೂಪಕಿ, ನಟಿ ಅನುಶ್ರೀಯವರು ಡ್ರಗ್ಸ್ ಸೇವನೆ ಮಾಡುತ್ತಿದ್ದರು. ಅಲ್ಲದೆ ನಮ್ಮ ಜೊತೆಯೇ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಎಂದು ಡ್ರಗ್ಸ್ ಪ್ರಕರಣದ ಆರೋಪಿ ಕಿಶೋರ್ ಶೆಟ್ಟಿ ಮಂಗಳೂರು ಸಿಸಿಬಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಕನ್ನಡದ ಖಾಸಗಿ ವಾಹಿನಿ ನಡೆಸುತ್ತಿದ್ದ ರಿಯಾಲಿಟಿ ಶೋ ವೇಳೆ ಅನುಶ್ರೀಯವರು ಡ್ರಗ್ ಸೇವನೆ ಮಾಡಿದ್ದರು. ಡ್ಯಾನ್ಸ್ ಪ್ರಾಕ್ಟೀಸ್ ಮಾಡುವ ವೇಳೆ ಸುಸ್ತು ಆಗಬಾರದೆನ್ನುವ ಕಾರಣಕ್ಕೆ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂದು ಕಿಶೋರ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.
ಡ್ರಗ್ಸ್ ಪ್ರಕರಣದ A1 ಆರೋಪಿ ತರುಣ್, A2 ಆರೋಪಿ ಕಿಶೋರ್ ಶೆಟ್ಟಿ ಮತ್ತು ಅನುಶ್ರೀಯವರು ಜೊತೆಯಲ್ಲಿಯೇ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂಬುದನ್ನು ಸ್ವತಃ ಕಿಶೋರ್ ಶೆಟ್ಟಿಯೇ ಹೇಳಿಕೊಂಡಿದ್ದಾನೆ. ನಾವೆಲ್ಲ ಜೊತೆಯಲ್ಲಿ ಪಾರ್ಟಿ ಮಾಡುತ್ತಿದ್ದೆವು. ಆ ವೇಳೆ ಅನುಶ್ರೀ ಡ್ರಗ್ಸ್ ತರುತ್ತಿದ್ರು ಎಂದು ಕಿಶೋರ್ ಹೇಳಿಕೊಂಡಿದ್ದಾನೆ.
PublicNext
08/09/2021 10:30 am