ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜು ತಾಳಿಕೋಟೆ ವಿರುದ್ಧ ಹಲ್ಲೆ ಆರೋಪ

ವಿಜಯಪುರ: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಅವರು ತಮ್ಮ ಸೋದರಳಿಯನ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ತಮ್ಮ ಅಕ್ಕನ ಕುಟುಂಬದಲ್ಲಿ ಉಂಟಾದ ಕಲಹ ಬಗೆಹರಿಸಲು ರಾಜು ತಾಳಿಕೋಟೆ ಹೋಗಿದ್ದರು. ಈ ವೇಳೆ ಅಕ್ಕನ ಮಗ ಫಯಾಜ್ ಕರಜಗಿ ಪರವಾಗಿ ನಿಂತು ರಾಜು ಅವರು ಫಯಾಜ್ ಪತ್ನಿ ಸನಾ ಕರಜಗಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ ಬಲವಂತಾಗಿ ವಿಷ ಕುಡಿಸಿರುವ ಆರೋಪವನ್ನು ರಾಜು ತಾಳಿಕೋಟೆ ಎದುರಿಸುತ್ತಿದ್ದಾರೆ.

ಘಟನೆಯಲ್ಲಿ ಗಾಯಗೊಂಡು ಸನಾ ಕರಜಗಿ ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಸನಾ ಅವರ ತಾಯಿ ಫಾತಿಮಾ ಶಿರಹಟ್ಟಿ ವಿಜಯಪುರ ಮಹಿಳಾ ಠಾಣೆಗೆ ದೂರು ಸಲ್ಲಿಸಿದ್ದಾರೆ. ದೂರಿನ ಅನ್ವಯ ಪೊಲೀಸರು ರಾಜು ತಾಳಿಕೋಟೆ, ಪತ್ನಿ ಪ್ರೇಮಾ ತಾಳಿಕೋಟೆ, ಫಯಾಜ್ ಕರಜಗಿ, ಸನಾ ಭಾವ ಪಿಂಟು ಸೇರಿ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸನಾ ತಾಯಿಯ ಆರೋಪವನ್ನು ತಳ್ಳಿ ಹಾಕಿರುವ ರಾಜು ತಾಳಿಕೋಟೆ, "ತಮ್ಮ ಮೇಲೆ ಸನಾ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ. ಪಿಸ್ತೂಲ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾರೆ. ಜೊತೆಗೆ ಸನಾ ಕರಜಗಿ ಸಂಬಂಧಿಕ ಎಸ್.ಕೆ.ಮೋದಿ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ರಾಜು ಹೇಳಿಕೆ ನೀಡಿದ್ದಾರೆ.

Edited By : Vijay Kumar
PublicNext

PublicNext

14/09/2021 05:46 pm

Cinque Terre

48.72 K

Cinque Terre

0