ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಡ್ರಗ್ಸ್ ಪಾರ್ಟಿ- ಶಾರುಖ್ ಪುತ್ರ ಆರ್ಯನ್ ಅರೆಸ್ಟ್

ಮುಂಬೈ: ಮುಂಬೈನ ತೀರ ಪ್ರದೇಶದ ಐಷಾರಾಮಿ 'ಕ್ರೂಸ್' ಹಡಗಿನಲ್ಲಿ ನಡೆದಿದ್ದ ಡ್ರಗ್ಸ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ನನ್ನು ಎನ್​ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಸತತ 7 ಗಂಟೆಗಳ ವಿಚಾರಣೆ ಬಳಿಕ ವಶಕ್ಕೊಳಗಾದವರನ್ನು ಬಂಧಿಸಲಾಗಿದ್ದು, ಸದ್ಯ ವೈದ್ಯಕೀಯ ಪರೀಕ್ಷೆಗಾಗಿ ಕರೆದೊಯ್ಯಲಾಗಿದೆ.

ಮುಂಬೈ ಬಂದರಿನಲ್ಲಿ ನಿನ್ನೆ (ಶನಿವಾರ) ರಾತ್ರಿ ಕ್ರೂಸ್ ಒಂದರಲ್ಲಿ ಡ್ರಗ್ಸ್ ಪಾರ್ಟಿ ನಡೆದಿದೆ ಎಂಬ ಮಾಹಿತಿಯ ಮೇರೆಗೆ ಎನ್​ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಡ್ರಗ್ಸ್ ಸಹ ಪತ್ತೆಯಾಗಿದ್ದು, ಇಬ್ಬರು ಯುವತಿಯರು, ಆರ್ಯನ್ ಖಾನ್ ಸೇರಿದಂತೆ ಮುನ್‌ಮುನ್ ದಮೇಚಾ, ನೂಪೂರ್ ಸಾರಿಕಾ, ಇಸ್‌ಮಿತ್ ಸಿಂಗ್, ಮೋಹಕ್ ಜೆಸ್ವಾಲ್, ವಿಕ್ರಾಂತ್ ಚೊಕ್ಕರ್, ಗೋಮಿತ್ ಚೋಪ್ರಾ, ಅರ್ಬಾಜ್ ಮರ್ಚಂಟ್ ಎನ್ನುವರನ್ನು ಎನ್‌ಸಿಬಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿತ್ತು.

ವಿಚಾರಣೆ ಬಳಿಕ ಆರ್ಯನ್ ಖಾನ್ ಸೇರಿದಂತೆ ಒಟ್ಟು 7 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ ಎಂಬ ಮಾಹಿತಿ ಇದೆ. ವೈದ್ಯಕೀಯ ಚಿಕಿತ್ಸೆಯ ನಂತರ ಬಂಧಿತರನ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಕೇಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

Edited By : Vijay Kumar
PublicNext

PublicNext

03/10/2021 04:28 pm

Cinque Terre

129.79 K

Cinque Terre

17

ಸಂಬಂಧಿತ ಸುದ್ದಿ