ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ವಾಟ್ಸಪ್ ಚಾಟ್ ಅನ್ನು ಎನ್‌ಸಿಬಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದು, ಸ್ಫೋಟಕ ಮಾಹಿತಿ ಸಿಕ್ಕಿದೆ.
ಹೌದು. ಆರ್ಯನ್ ಖಾನ್ ನಿತ್ಯವೂ ಡ್ರಗ್ಸ್ ಆರ್ಡರ್ ಮಾಡುತ್ತಿದ್ದ ಎಂಬ ಮಾಹಿತಿ ವಾಟ್ಸಪ್ ಚಾಟ್‌ನಲ್ಲಿ ಲಭಿಸಿದೆ ಎಂದು ವರದಿಯಾಗಿದೆ. ಮುಂಬೈ ಬಂದರಿನಲ್ಲಿ ನಿನ್ನೆ (ಶನಿವಾರ) ರಾತ್ರಿ ಕ್ರೂಸ್ ಒಂದರಲ್ಲಿ ಡ್ರಗ್ಸ್ ಪಾರ್ಟಿ ನಡೆದಿದೆ ಎಂಬ ಮಾಹಿತಿಯ ಮೇರೆಗೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಡ್ರಗ್ಸ್ ಸಹ ಪತ್ತೆಯಾಗಿದ್ದು, ಆರ್ಯನ್ ಖಾನ್ ಸೇರಿದಂತೆ ಮುನ್‌ಮುನ್ ದಮೇಚಾ, ನೂಪೂರ್ ಸಾರಿಕಾ, ಇಸ್‌ಮಿತ್ ಸಿಂಗ್, ಮೋಹಕ್ ಜೆಸ್ವಾಲ್, ವಿಕ್ರಾಂತ್ ಚೊಕ್ಕರ್, ಗೋಮಿತ್ ಚೋಪ್ರಾ, ಅರ್ಬಾಜ್ ಮರ್ಚಂಟ್ ಹಾಗೂ ಇಬ್ಬರು ಯುವತಿಯರನ್ನು ಎನ್‌ಸಿಬಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿತ್ತು. ವಿಚಾರಣೆ ಬಳಿಕ ಆರ್ಯನ್ ಖಾನ್ ಸೇರಿದಂತೆ ಒಟ್ಟು ಏಳು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ.
ಬಂಧಿತರನ್ನು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಿ ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಕೇಳುವ ಸಾಧ್ಯತೆ ಇದೆ.
PublicNext
03/10/2021 05:48 pm