ಬೆಂಗಳೂರು: ಕಸ ಗುಡಿಸುವಾಗ ತನ್ನ ಸ್ನೇಹಿತರ ಮೇಲೆ ಧೂಳು ಬಿದ್ದಿತೆಂಬ ಕಾರಣಕ್ಕೆ ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್
ಬೇರೊಂದು ಮನೆಗೆ ನುಗ್ಗಿ ಕೆಲಸದವರ ಮೇಲೆ ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಅಲ್ಲದೇ ತಮ್ಮೊಂದಿಗೆ 10 ಜನ ಬೌನ್ಸರ್ಗಳನ್ನು ಕರೆದುಕೊಂಡು ಹೋಗಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಈ ಘಟನೆಯ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ಈಸ್ಟ್ ವೆಸ್ಟ್ ಗ್ರೂಪ್ ಮಾಲೀಕ ರಜತ್ ಮನೆಗೆ ನುಗ್ಗಿ ಹಲ್ಲೆ ಮಾಡಲಾಗಿದೆ. ಮನೆಯ ಇಬ್ಬರು ಮಹಿಳಾ ಸಿಬ್ಬಂದಿಗೆ ಥಳಿಸಿದ ಆರೋಪ ಕೂಡ ಇದೆ. ಸದ್ಯ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೇ ಟೀಮ್ ಇದಕ್ಕೂ ಮುನ್ನ ಇದೇ ರೀತಿ ಗಲಾಟೆ ಮಾಡಿಕೊಂಡಿತ್ತು ಎಂಬ ಆರೋಪ ಇದೆ. 'ಅಪ್ಪು ಪಪ್ಪು' ಚಿತ್ರದ ಮೂಲಕ ಸ್ನೇಹಿತ್ ಹಿರಿತೆರೆ ಮೇಲೆ ಕಾಣಿಸಿಕೊಂಡಿದ್ದರು.
PublicNext
23/10/2021 10:49 pm