ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಟ ಶೇಷಗಿರಿ ಬಂಧನ: ವಂಚನೆ ಹಾಗೂ ಲೈಂಗಿಕ ದೌರ್ಜನ್ಯ ಆರೋಪ

ಬೆಂಗಳೂರು: ಬ್ಯಾಂಕ್‌ನಲ್ಲಿ ಕೆಲಸ ಕೊಡಿಸೋದಾಗಿ ವಂಚಿಸಿದ್ದೂ ಅಲ್ಲದೇ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನಟ ಶೇಷಗಿರಿ ಅವರನ್ನು ಬಂಧಿಸಲಾಗಿದೆ.

ಈ ಬಗ್ಗೆ ಯುವತಿ ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ದೂರು ನೀಡಿದ ಸಂಗತಿ ತಿಳಿದ ನಟ ಶೇಷಗಿರಿ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಸುಮಾರು ದಿನಗಳ ಕಾಲ ಹುಡುಕಾಟ ನಡೆಸಿದ ಪೊಲೀಸರಿಗೆ ಆರೋಪಿ ಮೈಸೂರಿನಲ್ಲಿ ಸೆರೆ ಸಿಕ್ಕಿದ್ದಾನೆ. ಈಗಾಗಲೇ ಯುವತಿಯ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತ ಆರೋಪಿ ಶೇಷಗಿರಿ ಹಲವು ಚಿತ್ರಗಳಲ್ಲಿ ಖಳನಟರಾಗಿ ಅಭಿನಯಿಸಿದ್ದಾರೆ.

Edited By : Nagaraj Tulugeri
PublicNext

PublicNext

26/10/2021 07:18 pm

Cinque Terre

41.58 K

Cinque Terre

0