ಬೆಳಗಾವಿ: ನಟ ಪುನೀತ್ ರಾಜ್‌ಕುಮಾರ್ ನಿಧನದ ಸುದ್ದಿಯಿಂದ ಆಘಾತಕ್ಕೆ ಒಳಗಾದ ಅಪ್ಪಟ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಅಥಣಿ ಪಟ್ಟಣದ ವಡ್ಡರಗಲ್ಲಿಯಲ್ಲಿ ನಡೆದಿದೆ.
ರಾಹುಲ್ ಗಾಡಿವಡ್ಡರ್ (22) ಆತ್ಮಹತ್ಯೆಗೆ ಶರಣಾದ ಯುವಕ. ರಾಹುಲ್ ನಿನ್ನೆ ಸಂಜೆ ಗೆಳೆಯರೊಟ್ಟಿಗೆ ಪುನೀತ್ ರಾಜ್‌ಕುಮಾರ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ. ಅಲ್ಲಿಂದ ಮನೆಗೆ ತೆರಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
30/10/2021 07:57 am