ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಎನ್‌ಸಿಬಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ಬಾಲಿವುಡ್ ಖ್ಯಾತ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ 26 ದಿನಗಳ ನಂತರ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ.
ನಾಲ್ಕು ವಾರಗಳ ಕಾಲ ಮುಂಬೈ ಜೈಲಿನಲ್ಲಿ ಬಂಧಿತನಾಗಿದ್ದ ಆರ್ಯನ್‌ಗೆ ಮುಂಬೈ ನ್ಯಾಯಾಲಯ ಗುರುವಾರ ಷರತ್ತು ಬದ್ಧ ಜಾಮೀನು ನೀಡಿತ್ತು. ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಲು ಸಮಯ ಹಿಡಿದಿದ್ದರಿಂದ ಬಿಡುಗಡೆ ವಿಳಂಬವಾಗಿತ್ತು. ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿ ರಕ್ಷಣೆಯೊಂದಿಗೆ ಆರ್ಯನ್ ಕಾರು ಹತ್ತಿ ಮನೆ ಕಡೆ ಪ್ರಯಾಣ ಬೆಳೆಸಿದ್ದಾರೆ.
PublicNext
30/10/2021 04:57 pm