ತುಮಕೂರು: ‘ನನ್ನ ಸಾವಿಗೆ ನಾನೇ ಕಾರಣ. ಪುನೀತ್ ಅಭಿಮಾನಿಯಾಗಿದ್ದು, ಅವರ ಸಾವನ್ನು ನೋಡಲಾಗುತ್ತಿಲ್ಲ. ಪುನೀತ್ ಹೋದ ಜಾಗಕ್ಕೆ ನಾನು ಹೋಗುತ್ತಿದ್ದೇನೆ’ ಎಂದು ಪತ್ರ ಬರೆದಿಟ್ಟು ಅಪ್ಪು ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತುಮಕೂರು ತಾಲ್ಲೂಕಿನ ಹೆಬ್ಬೂರು ಹೋಬಳಿ ಕೋಡಿಪಾಳ್ಯ ಗ್ರಾಮದಲ್ಲಿ ಭರತ್ (30) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಭರತ್ ಗಾರೆ ಕೆಲಸ ಮಾಡಿಕೊಂಡಿದ್ದರು ಇನ್ನು ನಟನಂತೆ ಮೃತ ಅಭಿಮಾನಿ ಕಣ್ಣುಗಳನ್ನು ಕುಟುಂಬದವರು ದಾನ ಮಾಡಿದ್ದಾರೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
02/11/2021 07:43 pm