ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಂಗನಾ ವಿರುದ್ಧ ಎಫ್ಐಆರ್

ಮುಂಬೈ: ರೈತರು ಮತ್ತು ಸಿಖ್ ಸಮುದಾಯದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ದೇಶದ್ರೋಹ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ದೂರು ಸಲ್ಲಿಸಲಾಗಿತ್ತು. ಈ ದೂರಿನ ಅನ್ವಯ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಮುಂಬೈನಲ್ಲಿ FIR ನೊಂದಾಯಿಸಲಾಗಿದೆ.

ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ (ಡಿಎಸ್‌ಜಿಎಂಸಿ) ಮತ್ತು ಶಿರೋಮಣಿ ಅಕಾಲಿದಳದ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು 1984 ರ ಸಿಖ್-ವಿರೋಧಿ ದಂಗೆಗಳನ್ನು ಉಲ್ಲೇಖಿಸಿ ಕಂಗನಾ “ಉದ್ದೇಶಪೂರ್ವಕವಾಗಿ ಸಿಖ್ಖರನ್ನು ಪ್ರಚೋದಿಸುತ್ತಿದ್ದಾರೆ” ಎಂದು ಆರೋಪಿಸಿ ಮುಂಬೈನ ಖಾರ್‌ ಪೊಳಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಅದರ ಆಧಾರದಲ್ಲಿ FIR ನೋಂದಾಯಿಸಲಾಗಿದೆ.

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ನಂತರ ಕಂಗನಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಸಿಖ್ ಸಮುದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

Edited By : Nagaraj Tulugeri
PublicNext

PublicNext

23/11/2021 08:23 pm

Cinque Terre

65.66 K

Cinque Terre

19