ಭುವನೇಶ್ವರ: ಒಡಿಶಾದ ಜನಪ್ರಿಯ ಕಿರುತೆರೆ ನಟಿ ರಶ್ಮಿರೇಖಾ ಓಜಾ ತಾನು ವಾಸವಿದ್ದ ಒಡಿಶಾದ ರಾಜಧಾನಿ ಭುವನೇಶ್ವರದ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಭುವನೇಶ್ವರದ ನಯಾಪಲ್ಲಿ ಪ್ರದೇಶದಲ್ಲಿ ರಶ್ಮಿರೇಖಾ ಬಾಡಿಗೆ ಮನೆಯಲ್ಲಿ ತನ್ನ ಸ್ನೇಹಿತ ಸಂತೋಷ್‌ನೊಂದಿಗೆ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದರು ಎನ್ನಲಾಗಿದೆ. ಆದರೆ ಬಾಡಿಗೆ ಮನೆಯ ಸೀಲಿಂಗ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಈ ವೇಳೆ ಅಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿರುವ ಡೇತ್ ನೋಟ್ ಪತ್ತೆಯಾಗಿದೆ.
ರಶ್ಮಿರೇಖಾ ಸಾವಿನ ಹಿಂದೆ ಬಾಯ್‌ಫ್ರೆಂಡ್ ಸಂತೋಷ್ ಕೈವಾಡವಿದೆ ಎಂದು ನಟಿಯ ತಂದೆ ಆರೋಪಿಸಿದ್ದಾರೆ. ಆದರೆ ಸಾವಿಗೆ ಪ್ರೇಮ ವೈಫಲ್ಯ ಕಾರಣ ಎನ್ನಲಾಗುತ್ತಿದ್ದು, ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನಟಿ ರಶ್ಮಿರೇಖಾ ಮರಣೋತ್ತರ ಪರೀಕ್ಷೆಯ ವರದಿ ಬರುವವರೆಗೆ ಪೊಲೀಸರು ಕಾಯುತ್ತಿದ್ದಾರೆ. ಜಗತ್‌ಸಿಂಗ್‌ಪುರ ಜಿಲ್ಲೆಯವರಾದ ರಶ್ಮಿರೇಖಾ ಓಜಾ ಅವರು ದೈನಂದಿನ ಸೋಪ್ ಕೆಮಿತಿ ಕಹಿಬಿ ಕಹಾದಲ್ಲಿನ ಪಾತ್ರದೊಂದಿಗೆ ಖ್ಯಾತಿ ಗಳಿಸಿದ್ದರು.
PublicNext
22/06/2022 10:17 am