ತಿರುವನಂತಪುರಂ: ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧನಕ್ಕೊಳಪಡಿಸಲಾಗಿದೆ.
ವಿಚಾರಣೆಗೆಂದು ಎರ್ನಾಕುಲಂ ಸೌತ್ ಪೊಲೀಸ್ ಠಾಣೆಗೆ ಹಾಜರುಪಡಿಸಿದ ವೇಳೆ ವಿಜಯ್ ಬಾಬು ಅವರನ್ನು ಬಂಧಿಸಲಾಯಿತು. ಜೂನ್ 22ರಂದು ಅವರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು.
ನಟಿಯೊಬ್ಬರು ಸಿನಿಮಾ ಪಾತ್ರಗಳನ್ನು ನೀಡುವ ಕುರಿತಾಗಿ ಹೇಳಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ವಿಜಯ್ ಬಾಬು ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ್ದರು.
ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುರಸ್ಕರಿಸುವ ವೇಳೆ ಕೇರಳ ಹೈಕೋರ್ಟ್, ರಾಜ್ಯವನ್ನು ತೊರೆಯದಂತೆ ಮತ್ತು ಅವರ ಪಾಸ್‌ಪೋರ್ಟ್ ಸಲ್ಲಿಸುವಂತೆ ಹೇಳಿದೆ. ಇನ್ನು ಸೋಮವಾರದಿಂದ ಜುಲೈ 3ರವರೆಗೆ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ವಿಚಾರಣೆ ನಡೆಸಲು ತನಿಖಾ ತಂಡಕ್ಕೆ ಅನುಮತಿ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಯುವ ನಟ, ದೂರುದಾರರ ಗುರುತನ್ನು ಬಹಿರಂಗಪಡಿಸಿದ ಆರೋಪವೂ ಅವರ ಮೇಲಿದೆ.
PublicNext
27/06/2022 04:28 pm