ಕೋಲ್ಕತಾ: ಇತ್ತೀಚೆಗೆ ನಟಿಯರು ಹಾಗೂ ಮಾಡೆಲ್ ಗಳು ಆತ್ಮಹತ್ಯೆಗೆ ಶರಣಾಗುತ್ತಿರುವುದು ಹೆಚ್ಚಾಗಿದೆ. ಸದ್ಯ ಬಂಗಾಳಿಯ ಕಿರುತೆರೆ ನಟಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ, ನೆಟ್ಟಿಗರ ಸಮಯ ಪ್ರಜ್ಞೆಯಿಂದ ನಟಿಯ ಜೀವ ಉಳಿದಿದೆ.ಯುವನಟಿ ರೈ ದೆಬ್ಲಿನಾ ದೇ ಆತ್ಮಹತ್ಯೆ ಯತ್ನಿಸಿದ್ದಾರೆ. ಈಕೆ ಬೆಂಗಾಳಿ ಕಿರುತೆರೆ ಲೋಕ ಮತ್ತು ವೆಬ್ ಸರಣಿಗಳಲ್ಲಿ ನಟಿಸಿದ್ದಾರೆ.
ಹೌದು ಆತ್ಮಹತ್ಯೆಗೆ ಯತ್ನಿಸುವ ಮುನ್ನ ದೆಬ್ಲಿನಾ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಮಾಡಿದ್ದರು. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನನ್ನ ಪಾಲಕರು ಹಾಗೂ ಕುಟುಂಬವೇ ಕಾರಣ ಎಂದು ಬರೆದು, ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ, ದುಡುಕಿನ ನಿರ್ಧಾರ ತೆಗೆದುಕೊಂಡಿದ್ದರು.
ಇದನ್ನು ಗಮನಿಸಿದ ನೆಟ್ಟಿಗರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆ ವೇಳೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಡೆಬ್ಲಿನಾ, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ನೋಡಿ ಆಸ್ಪತ್ರೆಗೆ ದಾಖಲಿಸಿ ಪ್ರಾಣ ಉಳಿಸಿದ್ದಾರೆ.
PublicNext
28/06/2022 05:00 pm