ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ, ಚೆನ್ನೈ ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಸಪ್ಲೈ- ನಾಲ್ವರು ಅರೆಸ್ಟ್

ಬೆಂಗಳೂರು: ಉಡುಪಿ, ಚೆನ್ನೈ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ರಾಷ್ಟ್ರೀಯ ಮಾದಕ ವಸ್ತುಗಳ ನಿಯಂತ್ರಣ ದಳದ (ಎನ್‌ಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.

ಕರ್ನಾಟಕದ ಎ.ಹಶೀರ್, ಎಸ್‌.ಎಸ್‌.ಶೆಟ್ಟಿ, ಕೇರಳದ ಕೆ.ಪ್ರಮೋದ್ ಹಾಗೂ ಫಾಹಿಮ್ ಬಂಧಿತರು. ಆರೋಪಿಗಳು ಡಾರ್ಕ್್ನೆಟ್ ಮೂಲಕ ಡ್ರಗ್ಸ್ ಖರೀದಿಸಿ ತಂದು ಉಡುಪಿಯ ಮಣಿಪಾಲ್ ವಿಶ್ವವಿದ್ಯಾಲಯ, ಎನ್‌ಎಂಎಎಂಐಟಿ ಕಾಲೇಜು, ಮಣಿಪಾಲ್ ಕ್ಲಬ್‌ಗಳು, ಚೆನ್ನೈ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಮಾರುತ್ತಿದ್ದರು. ಆರೋಪಿಗಳು ಸಾಗಿಸುತ್ತಿದ್ದ 750 ಎಂಡಿಎಂಎ ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ.

ಎನ್‌ಸಿಬಿ ಅಧಿಕಾರಿಗಳು ಜುಲೈನಲ್ಲಿ ಕಾರ್ಯಾಚರಣೆ ನಡೆಸಿ ಅಂಚೆ ಕಚೇರಿಯಲ್ಲಿ ಪಾರ್ಸೆಲ್ ಹೋಗುತ್ತಿದ್ದ ಡ್ರಗ್ಸ್ ಜಪ್ತಿ ಮಾಡಿದ್ದರು. ಆದರೆ ಡ್ರಗ್ಸ್ ಯಾರು ತರಿಸಿದ್ದರು ಎಂಬುದು ಆರಂಭದಲ್ಲಿ ಗೊತ್ತಿರಲಿಲ್ಲ. ಹೀಗಾಗಿ ಹೆಚ್ಚಿನ ತನಿಖೆ ಕೈಗೊಂಡಾಗಲೇ ಈ ನಾಲ್ವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

Edited By : Vijay Kumar
PublicNext

PublicNext

29/09/2020 08:12 pm

Cinque Terre

57.3 K

Cinque Terre

0

ಸಂಬಂಧಿತ ಸುದ್ದಿ